ನನ್ನನ್ನು ಗಲ್ಲಿಗೆ ಹಾಕದರೂ ಸಂಕಲ್ಪ ಬದಲಾಗುವುದಿಲ್ಲ: ಫಾರೂಕ್‌ ಅಬ್ದುಲ್ಲಾ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವಿಶೇಷ ಸ್ಥಾನಮಾನವನ್ನು ಮರಳಿ ತರುವುದಕ್ಕಾಗಿ ಜಮ್ಮು ಕಾಶ್ಮೀರದ ಪ್ರಾದೇಶಿಕ ಪಕ್ಷಗಳು ಒಗ್ಗೂಡಿ ಹೋರಾಟ ಕಟ್ಟುತ್ತಿವೆ. ಈ ಬಗ್ಗೆ ಮಾತನಾಡಿರುವ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಸರ್ಕಾರ ಬೇಕಾದರೆ ನನ್ನನ್ನು ಗಲ್ಲಿಗೆ ಹಾಕಲಿ ಆದರೆ ನಮ್ಮ ಸಂಕಲ್ಪದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಾವು ಒಂದು ದೀರ್ಘ ರಾಜಕೀಯ ಹೋರಾಟದಲ್ಲಿ ನಿರತರಾಗಿದ್ದೇವೆ. ಸಂವಿಧಾನದ ನಿಯಮಾವಳಿಗಳ ಅನುಸಾರವಾಗಿಯೇ ನಮ್ಮ ನ್ಯಾಯೋಚಿತ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಫಾರೂಕ್ ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಘದಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ ಫಾರೂಕ್ ಅಬ್ದುಲ್ಲಾ ಅವರನ್ನು ವಿಚಾರಣೆಗೆ ಗುರಿಪಡಿಸಿತು.

ತಮ್ಮನ್ನು ಇಡಿ ವಿಚಾರಣೆಗೆ ಗುರಿಪಡಿಸಿರುವುದನ್ನು ರಾಜಕೀಯ ದ್ವೇಷ ಎಂದು ಬಣ್ಣಿಸಿದ ಫಾರೂಕ್ ಅಬ್ದುಲ್ಲಾ, ಆರ್ಟಿಕಲ್ 370 ಮರುಸ್ಥಾಪನೆಗಾಗಿ ನಡೆಯುತ್ತಿರುವ ಐಕ್ಯ ಹೋರಾಟವನ್ನು ಮುರಿಯಲು ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಫಾರೂಕ್ ಈ ವೇಳೆ ಕಿಡಿಕಾರಿದರು.

ಈ ಸಮಯದಲ್ಲಿ ಕಾಶ್ಮೀರಿಗರು ತಮ್ಮನ್ನು ಭಾರತೀಯ ಎಂದು ಹೇಳಿಕೊಳ್ಳುವುದಿಲ್ಲ: ಫಾರೂಕ್ ಅಬ್ದುಲ್ಲಾ!
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಘದಲ್ಲಿ ನಡೆದ ಸುಮಾರು 43.69 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 2018 ರಲ್ಲೇ ಫಾರೂಕ್ ಅಬ್ದುಲ್ಲಾ ಸೇರಿದಂತೆ ಇತರ ಮೂವರ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.


ಇದನ್ನೂ ಓದಿ: ಉಪಚುನಾವಣೆ: ಕೈ-ತೆನೆ ಪಕ್ಷಗಳಿಗೆ ಶಾಕ್‌; ಕಾಂಗ್ರೆಸ್‌, JDS ಮುಖಂಡರು BJPಗೆ ಪಕ್ಷಾಂತರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights