ಬಾರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ; ಯುವತಿ ಮೇಲೆ ಸರಣಿ ಅತ್ಯಾಚಾರ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಕರೆಸಿಕೊಂಡು ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಅಹಮದಾಬಾದ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಹ್ಮದಾಬಾದ್ ಮೂಲದ ಯುವಕ ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿ ಸ್ನೇಹ ಬೆಳೆಸಿದ್ದಾನೆ. ಯುವತಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆಕೆ ಅದನ್ನು ಅಕ್ಸೆಪ್ಟ್ ಮಾಡಿದ ಬಳಿಕ ಆಕೆಯೊಂದಿಗೆ ನಿರತಂರವಾಗಿ ಚಾಟ್ ಮಾಡಿ ಆಕೆಯ ಸ್ನೇಹ ಸಂಪಾದಿಸಿದ್ದಾನೆ. ಬಳಿಕ ಚಾಟ್ ವೇಳೆ ನಾನು ನಿನ್ನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ ಯುವಕ ಒಮ್ಮೆ ನಿನ್ನನ್ನು ಭೇಟಿ ಮಾಡಬೇಕು ಎಂದು ಹೇಳಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ ಕೈ ಗಳ ಮೇಲೆ ಬ್ಲೇಡ್ ನಿಂದ ಕುಯ್ದುಕೊಂಡ ಫೋಟೋಗಳನ್ನು ಯುವತಿಗೆ ಕಳುಹಿಸಿ ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಆತನ ಬೆದರಿಕೆಯಿಂದಾಗಿ ಯುವತಿ ಅಹ್ಮದಾಹಬಾದ್ ಗೆ ತೆರಳಿದ್ದು, ಈ ವೇಳೆ ಆಕೆಯನ್ನು ಹೊಟೆಲ್ ಗೆ ಕರೆದುಕೊಂಡ ಹೋದ ಯುವಕ 2 ದಿನಗಳ ಕಾಲ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಅಕ್ಟೋಬರ್ ತಿಂಗಳಿನಲ್ಲಿಯೂ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಅತ್ಯಾಚಾರ ಎಸಗಿದ ನಂತರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಅಲ್ಲದೆ, ಅಕ್ಟೋಬರ್ ವರೆಗೆ ಯುವಕ ತನ್ನೊಂದಿಗೆ ಸಂಪರ್ಕದಲ್ಲೇ ಇದ್ದ ಬಳಿಕ ನಾಪತ್ತೆಯಾಗಿದ್ದಾನೆ. ಆತನ ನಿಜವಾದ ಹೆಸರು ತಿಳಿದಿಲ್ಲ, ‘ಜಿದ್ದಿ ಲಡ್ಡಾ’ ಎಂಬ ಹೆಸರಿನಲ್ಲಿ ಇನ್‌ಸ್ಟಾಗ್ರಾಮ್ ಬಳಸುತ್ತಿದ್ದ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಉಜ್ಜಯಿನಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಅಹ್ಮದಾಬಾದ್‌ನ ಖಾದಿಯಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟ ವಿಚಾರದಲ್ಲಿ ಬಿಜೆಪಿ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್‌ ಕಾರಣ: ಶಿವಸೇನೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights