ಟಿಪ್ಪು ಈ ನಾಡಿನ ಮಗ, ಸಂಗೊಳ್ಳಿರಾಯಣ್ಣನ ಪ್ರತಿಮೆ ಸುವರ್ಣಸೌಧದಲ್ಲಿ ಸ್ಥಾಪಿಸಬೇಕು: ಹೆಚ್‌ ವಿಶ್ವನಾಥ್‌

’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನಾಡಿನ ಮಗ, ವೀರ ಹೋರಾಟಗಾರ. ವಿದ್ಯಾರ್ಥಿಗಳು ಗಾಂಧೀಜಿಯಿಂದ ಟಿಪ್ಪು ತನಕ ಎಲ್ಲರ ಚರಿತ್ರೆಯನ್ನು ಓದಬೇಕು ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್‌ ಹೇಳಿದ್ದಾರೆ.

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ, ಅದೇ ಸ್ಥಳದಲ್ಲೀ ಕೂಡಲೇ ಪ್ರತಿಮೆ ನಿರ್ಮಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಬೆಳಗಾವಿ ಚಲೋ ಪ್ರತಿಭಟನೆ ಕುರಿತು ಮಾತನಾಡಿರುವ ಹೆಚ್‌ ವಿಶ್ವನಾಥ್‌, ಉತ್ತರ ಕರ್ನಾಟಕದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್ ಇನ್ ಚೀಫ್ ಇದ್ದಂತೆ, ದಕ್ಷಿಣ ಭಾಗದಲ್ಲಿ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯದ ಕಹಳೆ ಊದಿದ ವೀರ ಎಂದು ಹೇಳಿದ್ದಾರೆ.

ಬಿಜೆಪಿ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾರಲ್ಲವೇ ಎಂದು ಕೇಳಿದ  ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್‌, ಹಾಗೆಲ್ಲ ಹೇಳಬಾರದು. ಟಿಪ್ಪು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ. ಆತ ಈ ನೆಲದ ಮಗ, ವೀರ ಹೋರಾಟಗಾರ ಎಂದು ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಬೆಳಗಾವಿ ಸುವರ್ಣ ಸೌಧದಲ್ಲಿ ಪ್ರತಿಷ್ಠಾಪನೆ ಆಗಲೇಬೇಕು. ಸ್ವಾತಂತ್ರ್ಯಕ್ಕೆ ಹೋರಾಡಿದ ಅಪ್ರತಿಮ ವೀರ ರಾಯಣ್ಣ. ಅವರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅವರ ಪ್ರತಿಮೆ ಸ್ಥಾಪಿಸುವುದು ಸರಕಾರದ ಕರ್ತವ್ಯ ಎಂದು ವಿಶ್ವನಾಥ್ ಆಗ್ರಹಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights