ಟೊಮೆಟೊ ಬೆಲೆ ಭಾರೀ ಏರಿಕೆ; ತಿಂಗಳ ಅಂತ್ಯದಲ್ಲಿ 100 ರೂ. ತಲುಪುವ ಸಾಧ್ಯತೆ!

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಟೊಮೆಟೊ ಬೆಲೆ ಭಾರೀ ಏರಿಕೆಯಾಗಿದೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 10-15ರೂ ಇದ್ದ ಟೊಮೆಟೊ ಬೆಲೆ, ಇದೀಗ 70-80 ರೂ.ಗೆ ಏರಿಕೆಯಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ 100 ರೂ. ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಕೆಲವೆಡೆ ಟೊಮೆಟೊ ಬೆಳೆ ನಾಶವಾಗುತ್ತಿದೆ. ಇದರಿಂದಾಗಿ ಟೊಮೆಟೊ ಇಳುವರಿ ಕಡಿಮೆಯಾಗಿದೆ ಎಂದು ತಿಳಿದು ಬಂದಿದೆ. ಆ ಕಾರಣದಿಂದಾಗಿ ಏಕಾಏಕಿ ಟೊಮೆಟೊ ಬೆಲೆ ಏರಿಕೆಯಾಗಿದೆ ಎಂದು ಕಂಡುಬಂದಿದೆ.

ಸೆಪ್ಟೆಂಬರ್‌ ತಿಂಗಳ ಅಂತ್ಯದಲ್ಲಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಟೊಮೆಟೊ ಬೆಳೆಗೆ ತೀವ್ರ ಹೊಡೆತ ಬಿದ್ದಿದೆ. ಹೀಗಾಗಿ ಈ ಜಿಲ್ಲೆಗಳಿಂದ ಬೆಂಗಳೂರು ಎಪಿಎಂಸಿಗೆ ಬರುತ್ತಿದ್ದ ಟೊಮೆಟೊ ಪ್ರಮಾಣದಲ್ಲಿ 40% ಕಡಿಮೆಯಾಗಿದೆ. ಬೇಡಿಕೆ ಹೆಚ್ಚಿದ್ದರೂ, ಪೂರೈಕೆ ಇಲ್ಲದ ಕಾರಣ ಬೆಲೆ ಏರಿಕೆಯಾಗಿದೆ. ಇದು ಕೆ.ಜಿಗೆ 100 ರೂ. ತಲುಪುವ ಸಾಧ್ಯತೆ ಇದೆ ಎಂದು ತರಕಾರಿ ಮಾರಾಟ ಸಂಘದ ಅಧ್ಯಕ್ಷ ಗೋಪಿ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ನಿರಂತರ ಮಳೆಯಿಂದಾಗಿ ಟೊಮೆಟೊ ಬೆಳೆಯಲು ಸಾಧ್ಯವಾಗಿಲ್ಲ. ಮಳೆ ಪರಿಸ್ಥಿತಿಯಿಂದಾಗಿ ಬೆಳೆ ಉತ್ಪಾದನೆ 50% ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಹೆಚ್ಚು ಇಳುವರಿ ಕಾಣದೆ ರೈತರು ಕಂಗಾಲಾಗಿದ್ದರೆ, ಇತ್ತ ಟೊಮೊಟೊ ಕೊಳ್ಳುವವರಿಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ಇದನ್ನೂ ಓದಿ: ರಾಯಚೂರನ್ನು ತೆಲಂಗಾಣದೊಂದಿಗೆ ವಿಲೀನಗೊಳಿಸಲು ಕರ್ನಾಟಕ ಬಿಜೆಪಿ ಶಾಸಕರ ಒತ್ತಾಯ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights