ನಾಳೆ ಉಪಚುನಾವಣೆ ಫಲಿತಾಂಶ – ‘ಗೆಲುವು ರಾಜಾಹುಲಿಗಲ್ಲ ಹುಲಿಯಾಗೆ!’

ಬಹುನಿರೀಕ್ಷಿತ ಆರ್.ಆರ್.ನಗರ, ಶಿರಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳೆ(ನ10) ಪ್ರಕಟವಾಗಲಿದೆ. ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆಲವು ನಮ್ಮದೇ ಎನ್ನುವ ವಿಶ್ವಾಸ ವ್ಯಕ್ತಪಡಿಸಿದೆ. ಆದರೆ ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಕೊರೊನಾ ಲಾಕ್ ಡೌನ್ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾ ಆತಂಕದಲ್ಲಿ ಜನ ಮತಕಟ್ಟೆಗಳಿಗೆ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಈ ಬಾರಿ ನಿರೀಕ್ಷಿತ ಮತ ಚಲಾವಣೆಯಾಗದೇ ಇದ್ದರೂ ಕೆಲ ಸಮೀಕ್ಷೆಗಳಿಂದ ಗೆಲವು ಯಾರಿಗೆ ಎನ್ನುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.

ಶಿವಮೊಗ್ಗ ನಗರಕ್ಕೆ ಆಗಮಿಸಿದ ಅವರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಸಿ ವೋಟರ್ಸ್ ಸಮೀಕ್ಷೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಆದರೆ ಅವರು ಯಾವ ಆಧಾರದ ಮೇಲೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ನಾನು ಕೂಡ ಎರಡೂ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿದ್ದೇನೆ. ಜನರ ಒಲವು ಕಾಂಗ್ರೆಸ್ ಪರ ಇರುವುದು ನನಗೆ ಕಂಡು ಬಂದಿದೆ. ಬಿಜೆಪಿ ಯವರು ಪ್ರಚಾರಕ್ಕಿಂತಲೂ ದುಡ್ಡು ಕೊಟ್ಟು ಚುನಾವಣೆ ಮಾಡಿದ್ದಾರೆ. ಆದರೆ ನಾವು ಜನರ ಬಳಿಗೆ ಹೋಗಿದ್ದೇವೆ. ಎರಡೂ ಕಡೆಯಲ್ಲೂ ನಾವೇ ಗೆಲ್ಲುತ್ತೇವೆಂಬ ವಿಶ್ವಾಸವಿದೆ’ ಎಂದು ಹೇಳಿದರು.

ಆರ್.ಆರ್.ನಗರದಲ್ಲಿ ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರು ಸ್ಪರ್ಧಿಸುತ್ತಿದ್ದಾರೆ. ಇನ್ನೂ ತುಮಕೂರು ಜಿಲ್ಲಾ ಶಿರಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ನಡುವೆ ತೀವ್ರ ಪೈಪೋಟಿ ಇದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights