TV : ಧಾರಾವಾಹಿ ಶೂಟಿಂಗಿಗೆ YES, ಚಲನಚಿತ್ರಗಳಿಗೆ No – ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ

ಲಾಕ್‌ಡೌನ್‌ ಸಡಿಲದ ಅಂಗವಾಗಿ ಟಿವಿ ಸಿರಿಯಲ್‌ಗಳ ಶೂಟಿಂಗ್ ಪುನಾರಮಭಕ್ಕೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿಸಿದೆ. ಕೊರೋನಾ ಸಂಬಂಧ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್ ಮಾಡಬಹುದು ಎಂದು ಕಂದಾಯ ಸಚಿವ ಅಶೋಕ ಹೇಳಿದ್ದಾರೆ.

ಸುಮಾರು ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಇದರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಸೀರಿಯಲ್ ಶೂಟಿಂಗ್ ಪುನಾರಂಭಕ್ಕೆ ಅನುಮತಿ ನೀಡಲಾಗಿದೆ. ಚಿತ್ರೀಕರಣ ಮನೆ ಒಳಗೆ ಮಾತ್ರ ನಡೆಯುತ್ತವೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಇಲ್ಲ ಎಂದು ಅಶೋಕ ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಚಲನಚಿತ್ರಗಳಾಗಲೀ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿಲೀ ಯಾವುದೇ ವಿನಾಯಿತಿ ಇಲ್ಲ ಎಂದು ಅವರು ಹೇಳಿದ್ದಾರೆ.ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ಕಾಮಗಾರಿ ಆರಂಬಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಗುಳೆ ಹೋಗುತ್ತಿರುವ ಕಾರ್ಮಿಕರ ಮನವೊಲಿಸಲಾಗಿದೆ.

ಬಿಹಾರ ಕಾರ್ಮಿಕರು ತಮ್ಮ ಪ್ರದೇಶಗಳಿಗೆ ವಾಪಸ್ ಬರಲು ಒಪ್ಪಿದ್ದಾರೆ. ತಮ್ಮ ರಾಜ್ಯಗಳಿಗೆ ಹೋಗುವುದು ಬೇಡ ಇಲ್ಲಿಯೇ ಕೆಲಸ ಸಿಗಲಿದೆ ಎಂಬ ಭರವಸೆ ನೀಡಿದ್ದೇವೆ. ಹೀಗಾಗಿ ಅವರು ಇಲ್ಲೆ ಇರಲು ಒಪ್ಪಿದ್ದಾರೆ ಎಂದು ಸಚಿವರು ತಿಳಿಸಿದರು.

ನೋಂದಣಿ ಮತ್ತು ಮುದ್ರಾಂಕದಿಂದ ಮೊದಲ ದಿನ 6 ಲಕ್ಷ ಆದಾಯ ಬಂದಿತ್ತು. ಲಾಕ್‌ಡೌನ್ ಸಡಿಲದ ಮೇಲೆ ಸೋಮವಾರ 10 ಕೋಟಿ ಆದಾಯ ಬಂದಿದೆ ಎಂದರು.ಇದೇ ವೇಳೆ ವಿದೇಶದಿಂದ ಬರುವ ಕನ್ನಡಿಗರಿಗೆ ಅವರವರ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡಲು ಶಾಸಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಅದೇ ರೀತಿ ಕ್ವಾರಂಟೈನ್ ಮಾಡಲಾಗುವುದು ಎಂದು ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights