UGC ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಘೋಷಿಸಿದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ

ಕೊರೊನಾ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಅಥವಾ ಅಂತಿಮ ಸೆಮಿಸ್ಟರ್‌ನ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಉಳಿದ ಸೆಮಿಸ್ಟರ್‌ಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು,  ಪರೀಕ್ಷೆಗಳನ್ನು ನಡೆಸುವ ಕುರಿತು ಈ ಹಿಂದೆ UGC ಮಾರ್ಗಸೂಚಿಯನ್ನು ಹೊರತಂದಿತ್ತು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಒಳಿತನ್ನು ಗಮನದಲ್ಲಿರಿಸಿಕೊಳ್ಳುವುದರ ಜೊತೆಗೆ, ಉನ್ನತ ಶಿಕ್ಷಣ ಇಲಾಖೆಯು ಈ ಮಾರ್ಗಸೂಚಿಗಳನ್ನು ಗಣನೆಗೆ ತೆಗೆದುಕೊಂಡು ಎಲ್ಲಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಸಮಗ್ರ ಮೌಲ್ಯಮಾಪನದ (Comprehensive Evaluation) ಮಾನದಂಡದ ಮೇಲೆ ತೇರ್ಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆಂತರಿಕ ಅಂಕಗಳು ಮತ್ತು (ಅನ್ವಯವಾಗುವಲ್ಲಿ) ಹಿಂದಿನ ಸೆಮಿಸ್ಟರ್’ನ ಅಂಕಗಳ 50:50 ರೀತಿಯ Comprehensive Evaluation ಆಧಾರದ ಮೇಲೆ ತೇರ್ಗಡೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆಂಬ ಇಚ್ಛೆ ಇದ್ದಲ್ಲಿ, ಅವರುಗಳಿಗೆ ಮುಂದಿನ ಸೆಮಿಸ್ಟರ್’ನಲ್ಲಿ ಪ್ರತ್ಯೇಕ ಪರೀಕ್ಷೆಗಳನ್ನು ನಡೆಸಲಾಗುವುದು.

ವಿದ್ಯಾರ್ಥಿಗಳಿಗೆ backlog ಇದ್ದರೆ ಆ ವಿಷಯಗಳನ್ನು Carry Forward ಮಾಡಲಾಗುವುದು ಮತ್ತು ಮುಂದಿನ ಸೆಮಿಸ್ಟರ್’ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

Backlog ಗಳ ಸಹಿತ ಅಂತಿಮ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪರೀಕ್ಷೆಗಳನ್ನು ನಡೆಸಲಾಗುವುದು. ಸಂಬಂಧಪಟ್ಟ ವಿಶ್ವವಿದ್ಯಾಲಯಗಳು ಪರೀಕ್ಷಾ ವೇಳಾಪಟ್ಟಿಯನ್ನು ಮತ್ತು ಇತರ ಮಾಹಿತಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಿವೆ ಎಂದು ಅವರು ತಿಳಿಸಿದ್ದಾರೆ.

https://m.facebook.com/story.php?story_fbid=3423445977677134&id=547354238619670

ಅಂತಿಮ ಸೆಮಿಸ್ಟರ್ ಪರೀಕ್ಷೆ ಏಕೆ?:
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ.

ಕೋವಿಡ್- 19 ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
– ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights