ರಾಜ್ಯದ ಹಲವೆಡೆ ವರುಣನ ಅರ್ಭಟ : ಎಲ್ಲೋ ಅಲರ್ಟ್ ಘೋಷಣೆ..!

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ವಾತಾವರಣ ಬದಲಾಗಿದೆ. ಬೆಂಗಳೂರಿನಲ್ಲಿ ವರುಣನ ಅರ್ಭಟ ಹೆಚ್ಚಾಗಿದ್ದು ಬಿಟ್ಟು ಬಿಡದಂತೆ ಕಾಡುತ್ತಿದೆ.

ಕಳೆದ ಎರಡು ಮೂರು ದಿನಗಳಿಂದ ಮಳೆಯ ಅರ್ಭಟ ರಾಜ್ಯದ ಹಲವೆಡೆ ಜೋರಾಗಿದೆ. ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಸಿಲಿಕಾನ್ ಸಿಟಿ ಮಂದಿ ವಾಹನ ಸಂಚಾರಕ್ಕೆ ಪರದಾಡುವಂತ ಸ್ಥಿತಿ ಎದುರಾಗಿದೆ.

ನಿರಂತರ ಮಳೆಯಿಂದಾಗಿ ಜನ ಜೀವನವು ಅಸ್ಥವ್ಯಸ್ಥಗೊಂಡಿದೆ. ಬಿಟ್ಟುಬಿಡದೆ ಮಳೆಯಾಗುತ್ತಿದ್ದರಿಂದ ದಸರಾ ಹಬ್ಬದ ಪ್ರಯುಕ್ತ ಜನ ದೈನಂದಿನ ಕಾರ್ಯಗಳಲ್ಲಿ ಭಾಗಿಯಾಗಲು ಕಷ್ಟವಾಗುತ್ತಿದೆ.

ಇನ್ನೂ ನಾಲ್ಕು ದಿನಗಳವರೆಗೆ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಜ್ಯದ ಬೇರೆ ಬೇರೆ ವಲಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights