ಕಳೆದ ಆರು ವರ್ಷಗಳಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ?: ಮೋದಿಗೆ ಡಿಕೆಶಿ ಪ್ರಶ್ನೆ

ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲರೂ ಸಾಥ್‌ ಕೊಟ್ಟಿದ್ದಾರೆ. ಅವರು ಅಧಿಕಾರಕ್ಕೆ ಬಂದು ಆರು ವ‍‍ರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

‘ದೇಶದಲ್ಲಿ ಅತಿ ದೊಡ್ಡ ಬಹುಮತ ಇರುವ ಸರ್ಕಾರ ಇದೆ. ಇದು ಜನರು ಕೊಟ್ಟ ತೀರ್ಪು. ನಾವು ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಸರ್ಕಾರ ನುಡಿದಂತೆ ನಡೆಯಿತಾ? ಕೊಟ್ಟ ಮಾತು ಉಳಿಸಿಕೊಂಡಿತಾ? ಈ ದೇಶಕ್ಕೆ ಆದ ಲಾಭ ಏನು? ಹಿಂದೆ ಆರ್ಥಿಕ ತಜ್ಞರು ಪ್ರಧಾನ ಮಂತ್ರಿಯಾಗಿದ್ದಾಗ ದೇಶ ಹೇಗಿತ್ತು? ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷ ಆಯ್ತು. ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಜನರಿಗೆ ಅವರು ಉದ್ಯೋಗ ಕೊಟ್ಟರಾ? ಕಪ್ಪು ಹಣ ತಂದರಾ? ರಾಜ್ಯದಲ್ಲಿ ಶಾಂತಿ ಕಾಪಾಡಿದರಾ? ದೇಶದ ಗಡಿ ಉಳಿಸಿಕೊಂಡರಾ? ದೇಶದ ಐಕ್ಯತೆ, ಸಮಗ್ರತೆ, ಶಾಂತಿ ಉಳಿಸಿಕೊಂಡರಾ? ರೈತ ಉಳಿದನಾ? ಕಾರ್ಮಿಕ ಉಳಿದನಾ? ಇದರ ಬಗ್ಗೆ ಬಿಜೆಪಿ ಸ್ನೇಹಿತರು ಉತ್ತರಿಸಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.

ನಾನು ಪ್ರಕೃತಿ ನಿಯಮದಲ್ಲಿ ನಂಬಿಕೆ ಇಟ್ಟವನು. ಇಡೀ ಪ್ರಪಂಚ, ಮನುಕುಲ ನರಳುತ್ತಿದೆ. ಇಂತಹ ಸಂದರ್ಭದಲ್ಲಿ ಜನರನ್ನು ಕಾಪಾಡದ ಸರ್ಕಾರ ನಮಗೆ ಬೇಕೇ? ಶಾಲೆಗೆ ಹೋಗುವ ಚಿಕ್ಕ ಮಕ್ಕಳು, ಅವರ ಪೋಷಕರು ಆತಂಕ ಪಡುವಂತಾಗಿದೆ. ಈ ದೇಶದಲ್ಲಿ ಶಾಂತಿ ಕಾಪಾಡಿ, ಅಭಿವೃದ್ಧಿ ಮಾಡಬೇಕು. ಜನರ ಬದುಕಿನ ಬಗ್ಗೆ ಕಾಳಜಿ ವಹಿಸಿ, ನಾವೆಲ್ಲರೂ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಚುನಾವಣಾ ಅಧಿಸೂಚನೆ ಇನ್ನೂ ಬಿಡುಗಡೆ ಆಗಿಲ್ಲ. ಅದಕ್ಕಾಗಿ ನಾವು ಕಾಯುತ್ತಿದ್ದೇವೆ. ಅದಾದ ನಂತರ 14 ನೇ ತಾರೀಖು ರಾಜರಾಜೇಶ್ವರಿ ನಗರ ಉಪಚುನಾವಣೆ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. 15 ರಂದು ಶಿರಾದಲ್ಲಿ ನಾವೆಲ್ಲರೂ ಹೋಗಿ ನಾಮಪತ್ರ ಸಲ್ಲಿಸುತ್ತೇವೆ. ಎರಡೂ ಕಡೆ ನಾನು ಹಾಗೂ ಸಿಎಲ್ ಪಿ ನಾಯಕರಾದ ಸಿದ್ದರಾಮಯ್ಯನವರು ಇರುತ್ತಾರೆ ಎಂದು ಹೇಳಿದ್ದಾರೆ.

ನಾನು ಭ್ರಷ್ಟ ಅನ್ನೋ ಸಾಕ್ಷಿ ಜನರ ಮುಂದೆ ಇಡಲಿ:

ನಾನು ಭ್ರಷ್ಟನೋ ಅಥವಾ ತತ್ವಜ್ಞಾನಿಯೋ ಎಂಬುದನ್ನು ಸಿ.ಟಿ ರವಿ ಅವರು ಜನರ ಮುಂದೆ ಇಡಲಿ. ನನ್ನ ವಿರುದ್ಧ ಎಷ್ಟು ತನಿಖೆಯಾಗಿದೆ? ಯಾವ ದಾಖಲೆ ಇದೆ ಎಂಬುದನ್ನು ಜನರ ಮುಂದೆ ಇಡಲಿ. ಕೆಲವರಿಗೆ ನನ್ನ ಹೆಸರು ಹೇಳಿದರೆ ಮಾರ್ಕೆಟ್ ಸಿಗುತ್ತದೆ, ಹೀಗಾಗಿ ನನ್ನ ಬಗ್ಗೆ ಮಾತನಾಡುತ್ತಾರೆ. ಮಾತಾಡಿಕೊಳ್ಳಲಿ ಬಿಡಿ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.


ಇದನ್ನೂ ಓದಿ: ಹತ್ರಾಸ್‌ ಸಂತ್ರಸ್ತೆಯನ್ನು ಆಕೆಯ ತಾಯಿ ಮತ್ತು ಸಹೋದರನೇ ಕೊಂದಿದ್ದಾರೆ: ಪೊಲೀಸರಿಗೆ ಆರೋಪಿ ಪತ್ರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights