ಭಾರತದಲ್ಲಿ ಹೊಸದಾಗಿ 86,052 ಕೊರೊನಾ ಕೇಸ್ : 58 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ದಿನ ಕಳೆದಂತೆ ವೇಗವಾಗಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುವಂತೆ ಕಾಣಿಸುತ್ತಿಲ್ಲ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,052  ಹೊಸ ಕೊರೊನಾ ಕೇಸ್ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 58 ಲಕ್ಷ ದಾಟಿದೆ.

ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಕಳೆದ ಒಂದೇ ದಿನದಲ್ಲಿ 1,141 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೂ ದೇಶದ ಒಟ್ಟು 58,18,571 ಸೋಂಕಿತರ ಪೈಕಿ 9,70,116 ಸಕ್ರಿಯ ಪ್ರಕರಣಗಳು ಇದ್ದರೆ, 47,56,165 ಜನ ಗುಣಮುಖರಾಗಿದ್ದು, 92,290 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ವೇಳೆ ಮುಂದಿನ ದಿನಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗಲಿವೆ ಎಂದು ತಜ್ಞರು ಸುಳಿವು ನೀಡಿದ್ದಾರೆ.

ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ಸಾವಿನ ಸಂಖ್ಯೆ ಚಿಕ್ಕದಾಗಿದೆ ಎಂದು ತೋರುತ್ತದೆಯಾದರೂ, ಭಾರತದಲ್ಲಿ ದಿನಕ್ಕೆ ಸಂಬವಿಸುವ ಸಾವುಗಳ ಸಂಖ್ಯೆ ವಿಶ್ವದಲ್ಲೇ ಅತಿ ಹೆಚ್ಚಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು ವೇಗವಾಗಿ ಕುಸಿಯುತ್ತಿವೆ ಮತ್ತು ದೈನಂದಿನ ಗುಣಮುಖರಾಗುವವರ ಸಂಖ್ಯೆ ನೋಂದಣಿಯಾಗುತ್ತಿರುವ ಪ್ರಕರಣಗಳ ಸಂಖ್ಯೆಯನ್ನು ಮೀರಿದೆ. ಇದು ದೇಶದ ಚೇತರಿಕೆಯ ಪ್ರಮಾಣ ವೇಗವಾಗಿ ಏರುತ್ತಿದೆ ಎಂದು ಸೂಚಿಸುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights