ವಿಶ್ವವಿಖ್ಯಾತ ‘ಮೈಸೂರು ದಸರಾ-2021’ರ ಮಹೋತ್ಸವಕ್ಕೆ ಮಾಜಿ ಸಿಎಂ ಎಂ. ಕೃಷ್ಣ ಅವರಿಂದ ಚಾಲನೆ!

ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಂ. ಕೃಷ್ಣ ಅವರು ಇಂದು 410ನೇ ವಿಶ್ವವಿಖ್ಯಾತ ನಾಡಹಬ್ಬ, ನಾಡಿನ ಹೆಮ್ಮೆಯ ‘ಮೈಸೂರು ದಸರಾ-2021’ರ ಮಹೋತ್ಸವಕ್ಕೆ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ವೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಚಾಲನೆ ನೀಡಿದರು.

ದಸರಾ ಉದ್ಘಾಟಿಸಿ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಎಸ್ ಎಂ ಕೃಷ್ಣ ಅವರು,”ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ. ಮೈಸೂರು ದಸರಾ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶ ಮಾಡಿಕೊಟ್ಟ ಸಿಎಂಗೆ ನನ್ನ ಅನಂತ ಧನ್ಯವಾದ” ಎಂದರು.

ನನ್ನ ವಿದ್ಯಾಭ್ಯಾಸದ ದಿನಗಳಲ್ಲಿ ಪ್ರತಿನಿತ್ಯ ತಾಯಿಗೆ ನಮಿಸುತ್ತಿದ್ದೆ. ಶಾಲೆಗೆ ಹೋಗುವುದಕ್ಕೂ ಮುನ್ನ ದೇವಿಗೆ ನಮಿಸುತ್ತಿದ್ದೆ. ಮೈಸೂರು ದಸರಾಗೆ ವಿದೇಶಗಳಿಂದಲೂ ಜನ ಬರುತ್ತಿದ್ದರು. ದಸರಾ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡಿಯುತಿತ್ತು ಅಂತ ಇದೇ ವೇಳೆ ಎಸ್.ಎಂ.ಕೃಷ್ಣ ಬಾಲ್ಯದ ದಿನದಲ್ಲಿ ನಡೆಯುತ್ತಿದ್ದ ದಸರಾ ಬಗ್ಗೆ ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಬಿ,ಸಿ ಪಾಟೀಲ್, ಸಚಿವರಾದ ೆಸ್.ಟಿ ಸೋಮಶೇಖರ್, ಸುನೀಲ್ ಕುಮಾರ್, ನಾರಾಯಣ ಗೌಡ, ಶಶಿಕಲಾ ಜೊಲ್ಲೆ, ಬೆಲ್ಲದ್, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ತನ್ವೀರ್ ಸೇಠ್, ಹೆಚ್ ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಮಗ ಮಂಡಳಿ ಅಧ್ಯಕ್ಷರು ಉಪಸ್ಥಿತರಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights