ಮೈತ್ರಿ ಸರ್ಕಾರವನ್ನು ಯೋಗೇಶ್ವರ್ ಉರುಳಿಸಿಲ್ಲ; ಅವರು ಮಂತ್ರಿ ಸ್ಥಾನಕ್ಕೆ ಅರ್ಹರಲ್ಲ: ಹಳ್ಳಿಹಳ್ಳಿ

ಒಂದೆಡೆ ಕರ್ನಾಟಕ ಹೈಕೋರ್ಟ್‌ ಹೆಚ್‌ ವಿಶ್ವನಾಥ್‌ ಅವರಿಗೆ ಸಚಿವ ಸ್ಥಾನ ನೀಡಬಾರದು. ಅವರು ಸಚಿವ ಸ್ಥಾನಕ್ಕೆ ಅನರ್ಹರು ಎಂದು ಹೇಳಿದೆ. ಮತ್ತೊಂದೆಡೆ ಸಿಪಿ ಯೋಗೇಶ್ವರ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಇದರಿಂದಾಗಿ ಕೋಪಗೊಂಡಿರುವ ಹಳ್ಳಿಹಳ್ಳಿ ಸಿಎಂ ವಿರುದ್ಧವೇ ಕಿಡಿಕಾರಿದ್ದಾರೆ.

ಸಿ.ಪಿ ಯೋಗೇಶ್ವರ್‌ಗೆ ಮಂತ್ರಿಸ್ಥಾನ ನೀಡಲು ಇಷ್ಟೊಂದು ಅವಸರ ಮಾಡುತ್ತಿರುವುದೇಕೆ? ಅವರೇನು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ್ದರೆ? ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿಸಿದ್ದರೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯೋಗೇಶ್ವರ್ ಪಾತ್ರ ಏನೂ ಇಲ್ಲ. ಅವರು ಬಾಂಬೆ-ಪುಣೆಯಲ್ಲಿ ಸೂಟ್‌ಕೇಸ್ ಹಿಡ್ಕೊಂಡು ಓಡಾಡುತ್ತಿದ್ದವರು. ಅವರನ್ನ ಮಂತ್ರಿ ಮಾಡೋಕೆ ಅರ್ಜೆಂಟ್ ಯಾಕೆ ಬೇಕು. ಯತ್ನಾಳ್ ಅಥವಾ ಕತ್ತಿಯಂತಹ ನಾಯಕರು ಸರತಿಯಲ್ಲಿದ್ದಾರೆ. ಅವರನ್ನು ಮಂತ್ರಿ ಮಾಡಿ. ಇಂತಹ ಆತುರದ ನಿರ್ಧಾರ ತೆಗೆದುಕೊಂಡರೆ ನಿಮ್ಮ ನಾಯಕತ್ವದ ಬಗ್ಗೆ ಅಪನಂಬಿಕೆ ಬರಲಿದೆ ಎಂದು ಬಿಎಸ್‌ವೈ ವಿರುದ್ಧ ಹಳ್ಳಿಹಕ್ಕಿ ವಿಶ್ವನಾಥ್‌ ಕಿಡಿಕಾರಿದ್ದಾರೆ.

ನಿನ್ನೆಯ ಮಧ್ಯಂತರ ತೀರ್ಪಿನ ಆದೇಶ ನೋಡಿದ್ದೇನೆ. ಅದರ ತೀರ್ಪಿನ ಆರ್ಡರ್ ಕಾಪಿ‌ ಇನ್ನು ಕೈ ಸೇರಿಲ್ಲ. ಅದರಲ್ಲಿ ಸಚಿವರಾಗಬಾರದು ಅಂತ ಮಾತ್ರ ಹೇಳಿದ್ದಾರೆ. 2027ರವರೆಗೆ ನನ್ನ ವಿಧಾನಪರಿಷತ್ ಸ್ಥಾನಕ್ಕೆ ತೊಂದರೆಯಿಲ್ಲ ಎಂದು ಹೇಳಿದ್ದಾರೆ.

ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊತ್ತಿರುವ ಬಗ್ಗೆ ಮಾತನಾಡಿರುವ ಅವರು, ತಂದೆಯನ್ನು ಕೊಂದವನನ್ನೇ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ ಸಿಎಂಗೆ ಸ್ನೇಹಿತರಾಗಿದ್ದಾರೆ.  ನಮ್ಮ‌ ಪರಿಸ್ಥಿತಿ ಹಾಗೂ ಸರ್ಕಾರದ ಪರಿಸ್ಥಿತಿಯೂ ಹಾಗೆಯೇ ಇದೆ ಎಂದು ಮೈತ್ರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರ ಪತನವಾದ ವಿಚಾರವಾಗಿ, ನಾವು ಸರ್ಕಾರವನ್ನ ಬೀಳಿಸಲಿಲ್ಲ. ಕಾಂಗ್ರೆಸ್ ಜೆಡಿಎಸ್‌ನವರೇ ಬೀಳಿಸಿಕೊಂಡ್ರು. ಸಿದ್ದರಾಮಯ್ಯ, ಕುಮಾರಸ್ವಾಮಿಯವರೇ ಈ ಬಗ್ಗೆ ಹೇಳಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ರಮ್ಯಾ, ವಾಜೀದ್‌ ಖಾನ್ ವಿವಾಹ: ಸಂಗಾತಿ ಆಯ್ಕೆ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವಂತಿಲ್ಲ; ಹೈಕೋರ್ಟ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights