ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಕುರಿತು ಬ್ರಹ್ಮಾನಂದ ಸ್ವಾಮೀಜಿ ಸ್ಪೋಟಕ ಹೇಳಿಕೆ

ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಒಂದು ಕಾಲು ಹೊರಗಿಡುವ ಮೂಲಕ ರಾಜ್ಯದ ಮೈತ್ರಿ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಚಿವ ಸ್ಥಾನ ಕುರಿತು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬ್ರಹ್ಮಾನಂದ ಸ್ವಾಮೀಜಿ, ರಮೇಶ್ ಜಾರಕಿಹೊಳಿಯವರಿಗೆ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿಯವರ ಮನವೊಲಿಕೆಗೆ ದೋಸ್ತಿ ಪಕ್ಷದ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಸ್ವಾಮೀಜಿ ಅವರ ಈ ಬೇಡಿಕೆ ಮಹತ್ವ ಪಡೆದುಕೊಂಡಿದೆ. ಬ್ರಹ್ಮಾನಂದ ಸ್ವಾಮೀಜಿ ಅವರ ಮೂಲಕ ರಮೇಶ್ ಜಾರಕಿಹೊಳಿ ತಮ್ಮ ಮನದಿಂಗಿತವನ್ನು ಹೊರ ಹಾಕಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.