ಚಾಮುಂಡೇಶ್ವರಿಯಲ್ಲಿ ನಿಲ್ಲಲು ಹೆದರಿ ಸಿದ್ದರಾಮಯ್ಯ ಬಾದಾಮಿಗೆ ಹೋಗಿದ್ದಾರೆ : BSY

ದೊಡ್ಡಬಳ್ಳಾಪುರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಬಿಜೆಪಿಗೆ ಸಾರಥಿ ಸತ್ಯಪ್ರಕಾಶ್ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಶನಿವಾರ ದೆಹಲಿಗೆ ಯಡಿಯೂರಪ್ಪ ಪ್ರಯಾಣ ಬೆಳೆಸಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ‘ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ರವರಿಗೆ ಭಾರತ ರತ್ನ ನೀಡಲಿಲ್ಲ ಕಾಂಗ್ರೆಸ್. ದಲಿತರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ಬಾಬು ಜಗಜೀವನರಾವ್ ಪ್ರಧಾನಿಯಾಗುವುದನ್ನು ತಪ್ಪಿಸಿದವರು ಕಾಂಗ್ರೆಸ್ ‘ ಎಂದರು.

‘ ಪ್ರಧಾನಿ ಮೋದಿ ನದಿ ಜೋಡಣೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.. ಒಂದು ಲಕ್ಷ ಕೋಟಿ ಕೃಷಿಗೆ ಮೀಸಲಿಟ್ಟಿದ್ದೇವೆ. ರಾಹುಲ್ ಗಾಂಧಿ ಕರ್ಕೊಂಡ್ ಬಂದು ಮನ ಬಂದಂತೆ ಮಾತನಾಡುತ್ತಿದ್ದಾರೆ. ಚಾಮುಂಡೇಶ್ವರಿ ನಿಲ್ಲದೆ ಹೆದರಿ ಬಾದಾಮಿಗೆ ಹೋಗಿದ್ದಾರೆ ಮುಖ್ಯಮಂತ್ರಿ ‘ ಎಂದು ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.