Election : ಬೆಂಗಳೂರು ದಕ್ಷಿಣದಿಂದ BJP ಅಭ್ಯರ್ಥಿ ಅಂತಿಮ… ಇಲ್ಲಿದೆ details…

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕ್ಷೇತ್ರವಾದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತವಾಗಿದೆ.


96 ರಿಂದ ಸತತವಾಗಿ ಬೆಂಗಳೂರು ದಕ್ಷಿಣದಿಂದ ಗೆದ್ದಿದ್ದ ಅನಂತಕುಮಾರ್‌ ಸಾವಿನ ನಂತರ ್ಮುಂಬರುವ ಚುನಾವಣೆಯಲ್ಲಿ ಅವರ ಪತ್ನಿ ತೇಜಸ್ವಿನಿ ನಿಲ್ಲುತ್ತಾರಾ ಎಂಬ ಚರ್ಚೆ ನಡೆಯುತ್ತಿತ್ತು. ಈಗ ಈ ಪ್ರಶ್ನೆಗೆ ಸ್ವತ: ತೇಜಸ್ವಿನಿ ಅನಂತ್ ಕುಮಾರ್ ಅವರವೇ ಉತ್ತರ ನೀಡಿದ್ದು, ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಪತಿ ಅನಂತಕುಮಾರ್ ಅವರ ಉತ್ತಮ ಕೆಲಸಗಳನ್ನು ತಾವು ಮುಂದುವರೆಸಿಕೊಂಡು ಹೋಗುವುದಾಗಿ ತೇಜಸ್ವಿತಿ ತಿಳಿಸಿದ್ದಾರೆ. ಅಧಮ್ಯ ಚೇತನ ಎಂಬ ಸಂಸ್ಥೆ ನಡೆಸುತ್ತಿರುವ ತೇಜಸ್ವಿನಿ ಅನಂತಕುಮಾರ್ ಈ ಬಾರಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಅಧಿಕೃತವಾಗಿ ರಾಜಕೀಯ ರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ತೇಜಸ್ವಿನಿಯವರನ್ನು ನಿಲ್ಲಿಸುವ ಮೂಲಕ ಸುಲಭವಾಗಿ ಚುನಾವಣೆಯಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿ ಹಾಗೂ ಆರ್ ಎಸ್ ಎಸ್ ಲೆಕ್ಕಾಚಾರವೂ ಆಗಿದೆ ಎನ್ನಲಾಗಿದೆ.

ನ್ನು ಅನಂತ ಕುಮಾರ್ ಮಕ್ಕಳಾದ ಅಶ್ವರ್ಯ ಹಾಗೂ ವಿಜೇತಾ ಕೂಡ ತಮ್ಮ ತಾಯಿ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಬಲ ವ್ಯಕ್ತಪಡಿಸಿದ್ದು, ತಂದೆಯ ಉತ್ತಮ ಕಾರ್ಯಗಳನ್ನು ಅವರು ಮುಂದುವರೆಸಿಕೊಂಡು ಹೋಗಬೇಕೆಂದು ಆಶಿಸಿದ್ದಾರೆ. ಒಟ್ಟಾರೆ ತೇಜಸ್ವಿನಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ಬಿಜೆಪಿ ಟಿಕೆಟ್ ನೀಡುವುದು ಕೂಡ ಬಹುತೇಕ ಖಚಿತ ಎನ್ನಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.