ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಗಂಭೀರ್ ವಿದಾಯ – ಟ್ವಿಟರ್‌ನಲ್ಲಿ ನಿರ್ಧಾರ ತಿಳಿಸಿದ ಗೌತಿ

ಟೀಮ್ ಇಂಡಿಯಾದ ಎಡಗೈ ಆರಂಭಿಕ ಬ್ಯಾಟ್ಸಮನ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟರ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ತಮ್ಮ ನಿವೃತ್ತಿ ನಿರ್ಧಾರವನ್ನು ತಿಳಿಸಿದ್ದಾರೆ.

‘ ಅತ್ಯಂತ ಕಠಿಣವಾದ ನಿರ್ಧಾರಗಳನ್ನು ಕೆಲವೊಮ್ಮೆ ಅತ್ಯಂತ ಭಾರವಾದ ಹೃದಯದಿಂದ ತೆಗೆದುಕೊಳ್ಳಬೇಕಾಗುತ್ತದೆ. ಜೀವನ ಪೂರ್ತಿ ನನ್ನನ್ನು ಭೀತಿಗೊಳಿಸಿದ್ದ ನಿವೃತ್ತಿಯ ಘೋಷಣೆಯನ್ನು ಭಾರವಾದ ಹೃದಯದೊಂದಿಗೆ ಪ್ರಕಟಿಸುತ್ತಿದ್ದೇನೆ ‘ ಎಂದು ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ.

ಆಂಧ್ರಪ್ರದೇಶ ಹಾಗೂ ದೆಹಲಿ ತಂಡಗಳ ನಡುವೆ ಡಿಸೆಂಬರ್ 6ರಿಂದ ರಣಜಿ ಟ್ರೋಫಿ ಪಂದ್ಯ ನಡೆಯಲಿದೆ. ಅದು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.