ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಶರೀಫ್ ನಿಧನ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಶರೀಫ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಜಾಫರ್ ಶರೀಫ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿವಸಗಳ ಹಿಂದೆ ಜಾಫರ್ ಶರೀಫ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಶಾಸಕ ಎನ್ ಹ್ಯಾರಿಸ್, ವೀರಪ್ಪ ಮೊಯಿಲಿ ಸೇರಿದಂತೆ ಕಾಂಗ್ರೆಸ್ ನಾಯಕರು ಶರೀಫ್ ಅಂತಿಮ ದರ್ಶನ ಪಡೆದಿದ್ದಾರೆ.  1933 ನವೆಂಬರ್ 3ರಂದು  ಚಿತ್ರದುರ್ಗದ ಚಳ್ಳೆಕೆರೆಯಲ್ಲಿ ಜನಿಸಿದ್ದ  ಜಾಫರ್ ಶರೀಫ್ ಅವರು 6 ಬಾರಿ ಸಂಸದರಾಗಿದ್ದರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ ರೈಲ್ವೆ ಸಚಿವರಾಗಿ  ಅತ್ತ್ಯುತ್ತಮ ಕೆಲಸ ನಿರ್ವಹಿಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.