ಮೋದಿ ಸಂಪುಟದಲ್ಲಿ ಸುರೇಶ್‌ ಅಂಗಡಿ-ಪ್ರಹ್ಲಾದ್‌ ಜೋಷಿಗೂ ಮಂತ್ರಿ ಸ್ಥಾನ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆಗೆ ಈ ಸಮಾರಂಭ ನಡೆಯಲಿದ್ದು, ನರೇಂದ್ರ ಮೋದಿಯವರ ಜೊತೆ 40 ಕ್ಕೂ ಅಧಿಕ ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮೋದಿಯವರ ಸಂಪುಟದಲ್ಲಿ ಮತ್ತೊಮ್ಮೆ ಸಚಿವರಾಗುವುದು ಖಚಿತವಾಗಿದೆ. ಹಾಗೆ ಲಿಂಗಾಯತರ ಕೋಟಾದಲ್ಲಿ ಬೆಳಗಾವಿ ಸಂಸದ ಸುರೇಶ್‌ ಅಂಗಡಿಯವರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಷಿಯವರಿಗೂ ಅವಕಾಶ ಸಿಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನುಳಿದಂತೆ ಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ, ಶಿವಕುಮಾರ್‌ ಉದಾಸಿ ಮೊದಲಾದವರಿದ್ದು, ಯಾರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.